ಕನ್ನಡ ವರ್ಣಮಾಲೆ ಕನ್ನಡ ವರ್ಣಮಾಲೆಯಲ್ಲಿ ಒಟ್ಟು 49 ಅಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ವರ್ಗೀಕರಿಸಬಹುದು. ಸ್ವರಗಳು ಮತ್ತು ಸಂಧ್ಯಕ್ಷರಗಳು (13) ಯೋಗವಾಹಕಗಳು (2) ವ್ಯಂಜನಗಳು (34) ಸ್ವರಗಳು: (ಒಟ್ಟು-13) "ಸ್ವತಂತ್ರವಾದ, ಸ್ಪಷ್ಟವಾದ ಉಚ್ಚಾರಣೆಯನ್ನು ಹೊಂದಿರುವ ಅಕ್ಷರಗಳನ್ನು 'ಸ್ವರಗಳು' ಎಂದು ಕರೆಯಲಾಗುತ್ತದೆ." ಕನ್ನಡ ವರ್ಣಮಾಲೆಯಲ್ಲಿ ಒಟ್ಟು 13 ಸ್ವರಗಳಿದ್ದು ಅವುಗಳಲ್ಲಿ ಎರಡು ಅಕ್ಷರಗಳನ್ನು ಸಂಧ್ಯಕ್ಷರಗಳೆಂದೂ ಕರೆಯಲಾಗುತ್ತದೆ. ಅವುಗಳೆಂದರೆ:- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಸ್ವರಗಳನ್ನು 'ಹ್ರಸ್ವಸ್ವರ' 'ಧೀರ್ಘಸ್ವರ' ಮತ್ತು 'ಸಂಧ್ಯಕ್ಷರ' ಎಂದು ಮೂರು ವಿಧಗಳಾಗಿ ವಿಂಗಡಿಸಬಹುದು. * ಹ್ರಸ್ವಸ್ವರಗಳು:- ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಹ್ರಸ್ವಸ್ವರಗಳು ಎನ್ನುವರು. -ಅವುಗಳೆಂದರೆ- ಅ ಇ ಉ ಋ ಎ ಒ (ಒಟ್ಟು 6) * ಧೀರ್ಘಸ್ವರಗಳು:- ಎರಡು ಮಾತ್ರೆಗಳ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಧೀರ್ಘಸ್ವರಗಳು ಎನ್ನುವರು. ಅವುಗಳೆಂದರೆ- ಆ ಈ ಊ ಏ ಐ ಓ ಔ (ಒಟ್ಟು 7) [ಟಿಪ್ಪಣಿ:- ಯಾವುದೇ ಒಂದು ಅಕ್ಷರವನ್ನು ಉಚ್ಚರಿಸಲು ತೆಗೆದುಕೊಳ್ಳುವ ಸಮಯವನ್ನು ಮಾತ್ರೆಗಳಿಂದ ಅಳೆಯಲಾಗುತ್ತದೆ. 'ಅ' ಎಂಬ ಅಕ್ಷರವನ್ನು ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವುದರಿಂದ ಇದು ಹ್ರಸ್ವಸ್ವರ ವಾಗಿದೆ. ಹಾಗೆಯೇ ಈ ಎಂಬ ...